Home News ವಿಜಯಪುರ ಮಹಾನಗರ ಪಾಲಿಕೆ ನಾಮಪತ್ರ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ

ವಿಜಯಪುರ ಮಹಾನಗರ ಪಾಲಿಕೆ ನಾಮಪತ್ರ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನ

by vegadhut@gmail.com.
0 comments

ವಿಜಯಪುರ : ರಾಜ್ಯ ಚುನಾವಣಾ ಆಯೋಗವು ವಿಜಯಪುರ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ-2022ರ ಕುರಿತು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಕ್ಟೋಬರ್ 7ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,
ಅಕ್ಟೋಬರ್ 10ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಅಕ್ಟೋಬರ್ 17 ಕೊನೆಯ ದಿನವಾಗಿದೆ. ಅಕ್ಟೋಬರ್ 18ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಅಕ್ಟೋಬರ್ 20 ಕೊನೆಯದಿನವಾಗಿದೆ. ಮತದಾನವು ಅವಶ್ಯಕತೆಯಿದ್ದರೆ ಅಕ್ಟೋಬರ್ 28ರ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಮರು ಮತದಾನವಿದ್ದಲ್ಲಿ ಮತದಾನವು ಅಕ್ಟೋಬರ್ 30ರ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಅಕ್ಟೋಬರ್ 31ರಂದು ಬೆಳಗ್ಗೆ 8ರಿಂದ ಆಯಾ ತಾಲೂಕಿನ ಕೇಂದ್ರ ಸ್ಥಳಗಳಲ್ಲಿ ಮತ ಎಣಿಕೆ ನಡೆಯಲಿದೆ. ಅಕ್ಟೋಬರ್ 31ರಂದು ಈ ಚುನಾವಣೆಯ ಪ್ರಕ್ರಿಯೆಯು ಮುಕ್ತಾಯವಾಗಲಿದೆ ಎಂದು ತಿಳಿಸಿದರು.
ವಿಜಯಪುರ ವಿಧಾನಸಭಾ ಮತಕ್ಷೇತ್ರದ 263 ಮತಗಟ್ಟೆಗಳು, ನಾಗಠಾಣ ವಿಧಾನಸಭಾ ಕ್ಷೇತ್ರದ 45 ಮತಗಟ್ಟೆಗಳು ಹಾಗೂ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ 2 ಮತಗಟ್ಟೆಗಳ ಅಂತಿಮ ಮತದಾರರ ಪಟ್ಟಿ 13-01-2022ನ್ನು ಅಳವಡಿಸಿಕೊಂಡು ವಿಜಯಪುರ ಮಹಾನಗರ ಪಾಲಿಕೆಯ ಚುನಾವಣೆಗೆ ಒಟ್ಟು 303 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 13-01-2022ರಂತೆ ಒಟ್ಟು 2,94,173 ಮತದಾರರು ಇರುತ್ತಾರೆ. ಮುಂದುವರೆದು 14-1-2022 ರಿಂದ 15-09-2022ರವರೆಗೆ ಅದೆ ರೀತಿ 16-09-2022ರಿಂದ 7-10-2022ರವರೆಗೆ ವಿಧಾನಸಭೆ ಮತಕ್ಷೇತ್ರದ ಮತದಾರರ ಪಟ್ಟಿಯನ್ನು ಅಳವಡಿಸಿಕೊಂಡು ಪೂರಕ ಪಟ್ಟಿ-1 ಮತ್ತು ಪೂರಕ ಪಟ್ಟಿ-2ನ್ನು ತಯಾರಿಸಿ ಮತದಾರರ ವಿವರ ನೀಡಲಾಗುವುದು.

ಈ ಚುನಾವಣೆಯ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆಯು 10-10-2022ರಿಂದ 31-10-2022ರವೆಗೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ. ಈ ಚುನಾವಣೆಗೆ ಸಂಬAಧಿಸಿದAತೆ ನೀತಿ ಸಂಹಿತೆ ಪಾಲನೆ, ಅಭ್ಯರ್ಥಿಗಳ ಚುನಾವಣಾ ವೆಚ್ಚ, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ ಒಳಗೊಂಡAತೆ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊAಡ ತಂಡಗಳನ್ನು ರಚಿಸಲಾಗಿದೆ.
ಪಾಲಿಕೆಯ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಮಾಡಲಾಗುವುದು. ಪಾಲಿಕೆಯ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಗರಿಷ್ಟ 3 ಲಕ್ಷ ರೂ.ವೆಚ್ಚದ ಮಿತಿ ನಿಗದಿಪಡಿಸಲಾಗಿದೆ. ನಗರದ ದರಬಾರ ಶಾಲೆಯಲ್ಲಿ ಮಸ್ಟರಿಂಗ್ ಡಿಮಸ್ಟರಿಂಗ್ ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಮತದಾರರ ಪಟ್ಟಿ, ಮಾದರಿ ನೀತಿ ಸಂಹಿತೆ ಕುರಿತಾಗಿ ದೂರುಗಳು ಇದ್ದಲ್ಲಿ ಮಹಾನಗರ ಪಾಲಿಕೆಯ ಕಚೇರಿಯಲ್ಲಿ ಸ್ಥಾಪಿಸಲಾದ ದೂರವಾಣಿ ಸಂಖ್ಯೆಗೆ ಕರೆ ಮಾಡಿ ದೂರು ಸಲ್ಲಿಸಹುದಾಗಿದೆ ಎಂದು ಜಿಲ್ಲಾಧೀಕಾರಿಗಳು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಹೆಚ್.ಡಿ.ಆನಂದಕುಮಾರ ಅವರು ಮಾತನಾಡಿ, ಯಾವುದೇ ರೀತಿಯ ಅಡೆತಡೆಗಳಿಲ್ಲದೇ ಮಹಾನಗರ ಪಾಲಿಕೆಯ ಚುನಾವಣೆ ನಡೆಯಲು ಮತ್ತು ಈ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಯು ಸನ್ನದ್ದವಾಗಿದೆ. ಈ ಚುನಾವಣೆಗೆ ಗುರುತಿಸಿದ ಮತಗಟ್ಟೆಗಳ ಪೈಕಿ ಕೆಲವು ಮತಗಟ್ಟೆಗಳನ್ನು ಸೂಕ್ಷö್ಮ ಹಾಗೂ ಅತೀ ಸೂಕ್ಷö್ಮ ಮತ್ತು ಸಾಮಾನ್ಯ ಮತಗಟ್ಟೆಗಳು ಎಂದು ಗುರುತಿಸಿ ನಿಗಾ ವಹಿಸಲಾಗುತ್ತಿದೆ. ಒಟ್ಟು 700ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ರಮೇಶ ಕಳಸದ, ಚುನಾವಣಾ ತಹಸೀಲ್ದಾರರಾದ ಶಾಂತಲಾ ಚೆಂದನ್ ಹಾಗೂ ಇತರರು ಇದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

u00a92022u00a0Soledad.u00a0All Right Reserved. Designed and Developed byu00a0Penci Design.

Latest news